ಪ್ರಮುಖ ಸುದ್ದಿ

ಕೊರೋನಾ ಸೋಂಕಿಗೆ ಒಳಗಾಗಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್  ನಿಧನ

ದೇಶ(ಪುಣೆ)ಆ.5:- ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ಪುಣೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ 88 ವರ್ಷ ವಯಸ್ಸಾಗಿತ್ತು.  ಶಿವಾಜಿರಾವ್ ಅವರು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದರು. ಕಳೆದ ತಿಂಗಳು ಅವರು ಸೋಂಕಿಗೆ ಒಳಗಾಗಿದ್ದರು, ನಂತರ ಅವರನ್ನು ಚಿಕಿತ್ಸೆಗಾಗಿ ಪುಣೆಯ ಆಸ್ಪತ್ರೆಗೆ ದಾಖಲಿಸಲಾಯಿತು. ಶಿವಾಜಿ ಪಾಟೀಲ್ ನೀಲಂಗೆಕರ್ 1985-1986ರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಅವರನ್ನು ಲಾತೂರ್‌ನ ದೊಡ್ಡ ಸಹಕಾರಿ ನಾಯಕ ಎಂದೂ ಸಹ ಚಿರಪರಿಚಿತರಾಗಿದ್ದರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: