ಮೈಸೂರು

ಮುಖ್ಯ ಶಿಕ್ಷಕನೋರ್ವನ ಬರ್ಬರ ಹತ್ಯೆ

ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಶಶಿಭೂಷಣ್(47) ಎಂದು ಗುರುತಿಸಲಾಗಿದೆ. ಮಳವಳ್ಳಿ ತಾಲೂಕಿನ ಬಿದರಹೊಸಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ‍್ಯಾಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಶುಕ್ರವಾರ ಬೆಳಿಗ್ಗೆ ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಕತ್ತು ಕೊಯ್ದು ಹತ್ಯೆಗೈಯ್ದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.  ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು  ಪರಿಶೀಲನೆ ನಡೆಸುತ್ತಿದ್ದಾರೆ. (ಎಸ್.ಎನ್-ಎಲ್.ಜಿ)

Leave a Reply

comments

Related Articles

error: