ಮೈಸೂರು

ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ನಿಂತ ವ್ಯಕ್ತಿ ಸಾವು

ಮೈಸೂರು,ಆ.5:- ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ನಿಂತವರ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಓರ್ವರು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಅಣ್ಣೂರು ಗ್ರಾಮದ ಮಾದೇಗೌಡ(50)  ಎಂದು ಗುರುತಿಸಲಾಗಿದೆ. ಜೊತೆಯಲ್ಲಿ ನಿಂತಿದ್ದ  ಹನುಮಂತ ಶೆಟ್ಟಿ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ಅಣ್ಣೂರು ಗ್ರಾಮದ ಮುಖ್ಯ ರಸ್ತೆ ಬದಿಯಲ್ಲಿ ನಡೆದಿದ್ದು, ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: