ಕರ್ನಾಟಕಪ್ರಮುಖ ಸುದ್ದಿ

ಅಬಕಾರಿ ಸಚಿವ ಎಚ್.ನಾಗೇಶ್ ಅವರಿಗೆ ಕೊರೊನಾ ಭೀತಿ

ಬೆಂಗಳೂರು,ಆ.5-ಅಬಕಾರಿ ಸಚಿವ ಎಚ್.ನಾಗೇಶ್ ಅವರ ಆಪ್ತ ಸಹಾಯಕ ಹಾಗೂ ಇಬ್ಬರು ಗನ್ ಮ್ಯಾನ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸಚಿವರಿಗೆ ಕೊರೊನಾ ಆತಂಕ ಶುರುವಾಗಿದೆ.

ಆಪ್ತ ಸಹಾಯಕ ಸೇರಿದಂತೆ ಇಬ್ಬರು ಗನ್ ಮ್ಯಾನ್ ಗಳ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆ ಸಚಿವರಿಗೂ ಸೋಂಕು ತಗಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಚಿವ ಎಚ್.ನಾಗೇಶ್ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಸಚಿವರ ಮೂವರು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ಇರುವ ಅಬಕಾರಿ ಸಚಿವರ ಕೊಠಡಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿದೆ. ಇಬ್ಬರು ನಾಯಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ನಾಯಕರ ಜೊತೆಗೆ ಸಂಪರ್ಕ ಹೊಂದಿರುವ ಸಚಿವರು ಮತ್ತು ಸಿಬ್ಬಂದಿ ಸಹ ಹೋಮ್ ಕ್ವಾರೆಂಟೈನ್ ನಲ್ಲಿದ್ದಾರೆ. (ಎಂ.ಎನ್)

Leave a Reply

comments

Related Articles

error: