ಪ್ರಮುಖ ಸುದ್ದಿ

ಕೊಡಗಿನಲ್ಲಿ ಪರಿಹಾರ ಕೇಂದ್ರ

ರಾಜ್ಯ(ಮಡಿಕೇರಿ) ಆ.7:- ಕೊಡಗು ಜಿಲ್ಲೆಯಲ್ಲಿ ಕಳೆದ 03 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲೆಯ ಮೂರು ಭಾಗಗಳಲ್ಲಿ 03 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 20 ಕುಟುಂಬದ 48 ಜನರಿಗೆ ಆಶ್ರಯ ನೀಡಲಾಗಿದೆ.

ಕೆ.ವಿ.ಜಿ ಕಾಲೇಜು ಭಾಗಮಂಡಲ- ಒಟ್ಟು 01 ಕುಟುಂಬ 03 ಜನರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕರಡಿಗೋಡು – 17 ಕುಟುಂಬ 40 ಜನರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಕ್ಕಪೇಟೆ, ವಿರಾಜಪೇಟೆ – 02 ಕುಟುಂಬ 05 ಜನರು.

ಪರಿಹಾರ ಕೇಂದ್ರಗಳಲ್ಲಿ ಆಹಾರ ಸೇರಿದಂತೆ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: