
ಮೈಸೂರು
ಇಬ್ಬರಿಗೆ ಕೊರೋನಾ ಹಿನ್ನೆಲೆ : ಮೈಸೂರು ಮಹಾನಗರ ಪಾಲಿಕೆ ವಲಯ 6 ರ ಕಛೇರಿ ಸೀಲ್ ಡೌನ್
ಮೈಸೂರು,ಆ.8:- ಮೈಸೂರು ಮಹಾನಗರ ಪಾಲಿಕೆ ವಲಯ 6 ರ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಕಛೇರಿಯಲ್ಲಿರುವ ರೆವೆನ್ಯೂ ಇನ್ಸಪೆಕ್ಟರ್ ಮತ್ತು ಇಂಜಿನಿಯರ್ ಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಛೇರಿಯನ್ನು ಭಾನುವಾರದವರೆಗೆ ಸೀಲ್ ಡೌನ್ ಮಾಡಲಾಗಿದೆ.
ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಛೇರಿಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಬಳಿಕ ಬ್ಯಾರಿಕೇಡ್ ಅಳವಡಿಸಿ ಕಛೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ವಲಯಾಧಿಕಾರಿ ನಾಗರಾಜ್ ಸೇರಿದಂತೆ ಕಛೇರಿಯ ಎಲ್ಲಾ ಅಧಿಕಾರಿಗಳಿಗೂ ಹಾಗೂ ಸಿಬ್ಬಂದಿಗೂ ಹೋಂಐಸೋಲೇಶನ್ ನಲ್ಲಿರುವಂತೆ ಸೂಚಿಸಲಾಗಿದ್ದು ಪರೀಕ್ಷೆಗೆ ಸ್ವಾಬ್ ನೀಡಿದ್ದು ನೆಗೆಟಿವ್ ಬಂದವರನ್ನು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಕಛೇರಿ ಬಳಿ ಓರ್ವ ಸಿಬ್ಬಂದಿಯನ್ನು ನಿಯೋಜಿಸಿ ಸಾರ್ವಜನಿಕರು ಅಲ್ಲಿ ಸುಳಿಯದಂತೆ ನಿಗಾವಹಿಸಲಾಗಿದೆ. (ಕೆ.ಎಸ್,ಎಸ್.ಎಚ್)