ದೇಶಪ್ರಮುಖ ಸುದ್ದಿ

ಕೇರಳದ ಮುನ್ನಾರ್ ನಲ್ಲಿ ಭೂಕುಸಿತ: ಮೃತರ ಸಂಖ್ಯೆ 21ಕ್ಕೆ ಏರಿಕೆ

ಇಡುಕ್ಕಿ,(ಕೇರಳ),ಆ.8-ಭಾರೀ ಮಳೆಯಿಂದಾಗಿ ಇಲ್ಲಿನ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 21ಕ್ಕೆ ಏರಿದೆ.

ದುರಂತ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ. ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿರುವ ಅವರು, ಅಗ್ನಿಶಾಮಕ ದಳದ 50 ಸದಸ್ಯರ ವಿಶೇಷ ಕಾರ್ಯಪಡೆಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ರಾತ್ರಿ ಕೆಲಸ ಮಾಡಲು ಸಹ ಇವರ ಬಳಿ ಸಲಕರಣೆಗಳಿವೆ. ಇದರೊಂದಿಗೆ ತುರ್ತು ಸೇವೆಗಳ ಸಿಬ್ಬಂದಿಯನ್ನು ಸಹ ಕಳುಹಿಸಲಾಗಿದೆ. ಅಲ್ಲದೆ ಪರಿಹಾರ ಕಾರ್ಯಕ್ಕಾಗಿ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್ ಗಳ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಗಾಯಗೊಂಡವರನ್ನು ಮುನ್ನಾರ್ ನ ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಹಲವರುನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮುನ್ನಾರ್ ನಿಂದ 25 ಕಿ.ಮೀ.ದೂರದಲ್ಲಿರುವ ರಾಜಾಮಲೈ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದು, ಸುಮಾರು 80 ಜನ ಈ ಪ್ರದೇಶದಲ್ಲಿ ವಾಸವಿದ್ದರು. ಮಣ್ಣಿನಡಿ ಎಷ್ಟು ಜನ ಸಿಲುಕಿದ್ದಾರೆ ಎಂಬ ಕುರಿತು ಖಚಿತ ಮಾಹಿತಿ ಇಲ್ಲ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಎಂ.ಎನ್)

 

Leave a Reply

comments

Related Articles

error: