ದೇಶಪ್ರಮುಖ ಸುದ್ದಿ

ಕೊರೊನಾ ಭೀತಿ ಹಿನ್ನೆಲೆ: ಕೇರಳ ವಿಮಾನ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿರುವವರ ಭೇಟಿಗೆ ಅನುಮತಿ ನಿರಾಕರಣೆ

ಕೋಯಿಕ್ಕೋಡ್,(ಕೇರಳ),ಆ.8-ವಿಮಾನ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರು ರೋಗಿಗಳ ಭೇಟಿಗೆ ಯಾರಿಗೂ ಅನುಮತಿ ನೀಡಲಾಗುವುದಿಲ್ಲ ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಇಂದು ಆದೇಶ ಹೊರಡಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ರೋಗಿಗಳಿಗೆ ಇದುವರೆಗೂ ಕೊರೊನಾ ವೈರಸ್ ಪರೀಕ್ಷೆ ನಡೆಸಿಲ್ಲ. ಆದರೆ ಅವರ ಪೈಕಿ ಕೆಲವರಲ್ಲಿ ಸೋಂಕು ತಗುಲಿರುವ ಸಾಧ್ಯತೆಯಿದೆ ಎಂದು ಅವರು ಕಳವಳ ವ್ಯಕ್ತಪಡಿಸಿ ಗಾಯಗೊಂಡಿರುವವರನ್ನು ಭೇಟಿಯಾಗಲು ಅನುಮತಿಯಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಮತ್ತಷ್ಟು ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಲು, ರಾಜ್ಯ ಸರ್ಕಾರ ನಿರ್ದೇಶನಗಳನ್ನು ನೀಡಿದೆ ಎಂದಿದ್ದಾರೆ. ಏತನ್ಮಧ್ಯೆ, ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ದಾಖಲಿಸಲಾದ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ನೀಡಿದ್ದಾರೆ.

ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲಾ ಆಸ್ಪತ್ರೆಗಳಲ್ಲಿ 149 ಪ್ರಯಾಣಿಕರನ್ನು ದಾಖಲಿಸಲಾಗಿದ್ದು, ಈ ಪೈಕಿ 22 ಜನರ ಗಂಭೀರವಾಗಿದೆ. 22 ಜನರನ್ನು ಪ್ರಥಮ ಚಿಕಿತ್ಸಾ ನಂತರ ಬಿಡುಗಡೆ ಮಾಡಲಾಗಿದೆ ಎಂದು ಮಲಪ್ಪುರಂ ಜಿಲ್ಲಾಧಿಕಾರಿ ಖಚಿತಪಡಿಸಿದ್ದಾರೆ.

ವಿಮಾನ ವಂದೇ ಭಾರತ್ ಮಿಷನ್ ಅಡಿ ದುಬೈದಿಂದ ಕೋಯಿಕ್ಕೋಡ್​​ಗೆ ವಿಮಾನ ಆಗಮಿಸುತ್ತಿತ್ತು. ಅಪಘಾತದಲ್ಲಿ ಈವರೆಗೆ ವಿಮಾನದ ಇಬ್ಬರು ಪೈಲಟ್‌ಗಳು ಸೇರಿ ಕನಿಷ್ಠ 19 ಜನರು ಮೃತಪಟ್ಟಿದ್ದಾರೆ. (ಎಂ.ಎನ್)

Leave a Reply

comments

Related Articles

error: