ಮೈಸೂರು

ವಿದ್ಯಾರ್ಥಿಗಳು ಗುಣಮಟ್ಟದ ನಾಯಕತ್ವ ಬೆಳೆಸಿಕೊಳ್ಳಿ : ಠಾಕೂರ್ ದೇಸಾಯಿ

ಮೈಸೂರು ಮಕ್ಕಳ ಕೂಟ ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಮಹಾವಿದ್ಯಾಲಯ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಮೈಸೂರಿನ ಕೃಷ್ಣಮೂರ್ತಿ ಪುರಂನಲ್ಲಿರುವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭವನ್ನು ಭಾರತೀಯ ರಿಸರ್ವ್ ಬ್ಯಾಂಕ್ ನೋಟು  ಮುದ್ರಣ ಲಿ. ಜನರಲ್ ಮ್ಯಾನೇಜರ್ ಹೆಚ್.ಎಸ್. ಠಾಕೂರ್ ದೇಸಾಯಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಎಂಬುದು ಕಲಿತು ಮರೆಯುವುದಲ್ಲ, ಅದು ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆ ಹೊಂದಬೇಕು. ಶಿಕ್ಷಣ ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಬದಲಾಗುತ್ತದೆ ಎಂದರು. ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುವುದರ ಜೊತೆಗೆ ವಿವಿಧ ಕಾಲೇಜುಗಳಲ್ಲಿ ಏರ್ಪಡಿಸುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುಣಮಟ್ಟದ ನಾಯಕತ್ವವನ್ನು ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ರಂಗಾಯಣದ ಉಪ ನಿರ್ದೇಶಕಿ ನಿರ್ಮಲ ಮಠಪತಿ, ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಪುರುಷೋತ್ತಮ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಎಸ್.ಲಕ್ಷ್ಮಿಶಾಸ್ತ್ರಿ,  ಮಕ್ಕಳಕೂಟ ಮತ್ತು ಎಸ್ ಡಿಎಂ ಕಾಲೇಜಿನ  ಪ್ರಾಂಶುಪಾಲೆ ಎಂ.ವಿ.ಆಶಾ, ಅಧ್ಯಕ್ಷೆ ಚಂದನಾ ಬಿ. ಸೇರಿದಂತೆ  ಹಲವರು ಉಪಸ್ಥಿತರಿದ್ದರು.   (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: