Uncategorized

ಕೇರಳದ ಮುನ್ನಾರ್ ನಲ್ಲಿ ಭೂ ಕುಸಿತ: ಮೃತರ ಸಂಖ್ಯೆ 45ಕ್ಕೆ ಏರಿಕೆ

ಇಡುಕ್ಕಿ,(ಕೇರಳ),ಆ.10-ಜಿಲ್ಲೆಯ ಮುನ್ನಾರ್ ನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 45ಕ್ಕೇರಿದೆ. ಈ ದುರ್ಘಟನೆಯಲ್ಲಿ ಸುಮಾರು 50 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ತೀವ್ರ ಶೋಧದ ನಂತರ ನಿನ್ನೆ ಮಧ್ಯಾಹ್ನದಿಂದ ಇಂದು ಬೆಳಿಗ್ಗೆವರೆಗೆ 19 ಮೃತದೇಹಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 45ಕ್ಕೇರಿದೆ. ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಾರೆ 12 ಮಂದಿಯನ್ನು ರಕ್ಷಿಸಲಾಗಿದೆ. ಒಟ್ಟಾರೆ 12 ಮಂದಿಯನ್ನು ರಕ್ಷಿಸಲಾಗಿದೆ.

ಸರಕಾರದ ಮಾಹಿತಿ ಪ್ರಕಾರ, ಅವಘಡ ಸಂಭವಿಸುವ ವೇಳೆ ಸುಮಾರು 78 ಮಂದಿ ಇಲ್ಲಿ ವಾಸವಾಗಿದ್ದರು. ಘಟನೆ ನಡೆದು 3 ದಿನಗಳು ಕಳೆದರೂ, ಇನ್ನೂ 24 ಮಂದಿ ಪತ್ತೆಯಾಗಿಲ್ಲ. ಹೀಗಾಗಿ ಶ್ವಾನದಳದ ನೆರವು ಪಡೆಯಲು ಚಿಂತನೆ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆ.7 ರಂದು ನಸುಕಿನ ಜಾವ ಪೆಟ್ಟಿಮುಡಿ ಬೆಟ್ಟ ಕುಸಿದಿತ್ತು.

ಜಿಲ್ಲೆಯ ರಾಜಮಾಲಾ ಮತ್ತು ಮನ್ನಾರ್ ಪರ್ವತ ಶ್ರೇಣಿಯ ಪೆಟ್ಟಿಮುಡಿಯ ಹಲವೆಡೆ ನಿನ್ನೆ ಕೂಡ ಧಾರಾಕಾರ ಮಳೆಯಿಂದ ಭೂಕುಸಿತಗಳು ಸಂಭವಿಸಿವೆ. ಗುಡ್ಡ ಮತ್ತು ಭೂಕುಸಿತಗಳಿಂದಾಗಿ ಕಣ್ಣನ್ ದೇವನ್ ಚಹಾ ತೋಟಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 90ಕ್ಕೂ ಹೆಚ್ಚು ಕಾರ್ಮಿಕರು ಮಣ್ಣಿನ ಆವಶೇಷಗಳಡಿ ಸಿಲುಕಿದ್ದರು.

ಕೇರಳದ ಹಲವು ಜಿಲೆಗಳಲ್ಲಿ ವರುಣಾಸುರನ ಆರ್ಭಟ ತೀವ್ರಗೊಂಡಿದೆ. ಇಡುಕ್ಕಿ, ಪಾಲಾಕ್ಕಾಡ್, ಶ್ರಿಶೂರ್, ವಯನಾಡ್, ಕಣ್ಣೂರು, ಗುರುವಾಯೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ, ಭೀಕರ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿದ್ದು, ಸಾವು-ನೋವು ಮತ್ತು ಭಾರೀ ಹಾನಿಯ ವರದಿಯಾಗಿದೆ. ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ. ಪಕೃತಿ ವಿಕೋಪ ನಿರ್ವಹಣಾ ಪಡೆಗಳಾದ ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಪಿ ಯೋಧರು ಪರಿಸ್ಥಿತಿ ನಿಭಾಯಿಸಲು ಸಜ್ಜಾಗಿದ್ದಾರೆ. (ಎಂ.ಎನ್)

Leave a Reply

comments

Related Articles

error: