ಮೈಸೂರು

ಆಹಾರ ಇಲಾಖೆಯ ಉಪನಿರ್ದೇಶಕ ಕಾ.ರಾಮೇಶ್ವರಪ್ಪ ಎತ್ತಂಗಡಿ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕಾ. ರಾಮೇಶ್ವರಪ್ಪ ಅವರನ್ನು ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ಎತ್ತಂಗಡಿ ಮಾಡಲಾಗಿದೆ.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ 21 ಸಾವಿರ ಪಡಿತರ ಚೀಟಿ ವಿತರಣೆ ಮಾಡಿದ್ದಾರೆಂದು ರಾಮೇಶ್ವರಪ್ಪ  ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಅಲ್ಲದೇ ಉಪಚುನಾವಣೆಯಲ್ಲಿ ಸರ್ಕಾರದ ಪರ ಕೆಲಸ ಮಾಡುತ್ತಿದ್ದಾರೆಂಬ ಆರೋಪವೂ ಕೇಳಿ ಬಂದಿತ್ತು. ಇದೀಗ ಚುನಾವಣಾ ಆಯೋಗದ ಶಿಫಾರಸ್ಸಿನಂತೆ ಯಾವುದೇ ಸ್ಥಳ ತೋರಿಸದೆ ಕಾ.ರಾಮೇಶ್ವರಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ.

ಆಹಾರ ಇಲಾಖೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆನಂದ್ ಗೆ ಉಪನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ. (ಎಲ್.ಜಿ-ಎಸ್.ಎಚ್)

Leave a Reply

comments

Related Articles

error: