ಕರ್ನಾಟಕ

ಪ್ಲಾಸ್ಟಿಕ್ ಗೋಡಾನ್ ಗೆ ಬೆಂಕಿ : ಇಬ್ಬರು ಸಜೀವ ದಹನ

ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಹಳೇಗುಡ್ಡದಳ್ಳಿಯಲ್ಲಿನ  ವಿನಾಯಕ ನಗರದ ಪ್ಲಾಸ್ಟಿಕ್ ಗೋಡಾನ್ ಒಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಇಬ್ಬರು ಸಜೀವ ದಹನಗೊಂಡ ಘಟನೆ ನಡೆದಿದೆ.

ನಾಲ್ಕು ಅಂತಸ್ತುಗಳುಳ್ಳ ಈ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ. ಸಜೀವದಹನಗೊಂಡ  ಇಬ್ಬರು ಕಾರ್ಮಿಕರು ಬಿಹಾರ ಮೂಲದವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ಆರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.  ಅಗ್ನಿ ಆಕಸ್ಮಿಕದಲ್ಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಗೋಡಾನ್ ಇಬ್ರಾಹಿಂ ಖಲೀಲ್ ಎಂಬವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಸುರಕ್ಷಿತ ಕ್ರಮ ಕೈಗೊಳ್ಳದೇ ಫ್ಯಾಕ್ಟರಿ ನಡೆಸುತ್ತಿದ್ದರು ಎನ್ನಲಾಗಿದೆ. ಇದು ಖುರ್ಚಿ ತಯಾರಿಕಾ ಫ್ಯಾಕ್ಟರಿಯಾಗಿತ್ತು ಎಂದು ತಿಳಿದುಬಂದಿದೆ.   (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: