ಪ್ರಮುಖ ಸುದ್ದಿ

ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ

ರಾಜ್ಯ( ಮಡಿಕೇರಿ) ಆ.12 :- ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಂಗಳವಾರ ಸೋಮವಾರಪೇಟೆ ತಾಲ್ಲೂಕಿನ ಕೊಡಗರಳ್ಳಿ, ಕಂಬಿಬಾಣೆ, ನಂಜರಾಯಪಟ್ಟಣ, ಕೂಡಿಗೆ, ಕೂಡುಮಂಗಳೂರು, ಹೆಬ್ಬಾಲೆ, ತೊರೆನೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನು ಮತ್ತು ಮನೆ ಹಾಗೂ ಸಾರ್ವಜನಿಕ ಸಂಪರ್ಕ ರಸ್ತೆಯನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಹಾಗೆಯೇ ಗೌಡಳ್ಳಿ, ಹಂಡ್ಲಿ, ಕೊಡ್ಲಿಪೇಟೆ, ಬೆಸೂರು, ಬ್ಯಾಡಗೊಟ್ಟ, ಆಲೂರು ಸಿದ್ದಾಪುರ ಪಂಚಾಯತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನು ಮತ್ತು ಮನೆ ಹಾಗೂ ಸಾರ್ವಜನಿಕ ಸಂಪರ್ಕ ರಸ್ತೆ ಯನ್ನು ಅಧಿಕಾರಿ ಗಳೊಂದಿಗೆ ಪರಿಶೀಲಿಸಿದರು. ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: