ಮೈಸೂರು

ಗ್ರಾಮ ಪಂಚಾಯತ್ ಚುನಾವಣೆ: ಮತದಾರರ ಪಟ್ಟಿ ಸಿದ್ಧತೆಗೆ ವೇಳಾಪಟ್ಟಿ ಪ್ರಕಟ

ಮೈಸೂರು.ಆ.12:-  ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020 ರ ಸಂಬಂಧ ಮತದಾರರ ಪಟ್ಟಿಯ ಸಿದ್ಧತೆ ಕುರಿತು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕರಡು ಮತದಾರರ ಪಟ್ಟಿ ಪ್ರಕಟಣೆಯು ಆಗಸ್ಟ್ 7 ರಂದು ಸಂಬಂಧಪಟ್ಟ ತಾಲೂಕು ಕಚೇರಿಗಳಲ್ಲಿ ಪ್ರಚುರಪಡಿಸಲಾಗಿರುತ್ತದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 14 ಕೊನೆ ದಿನವಾಗಿದ್ದು, ಆಗಸ್ಟ್ 24 ರೊಳಗೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು ಆಗಸ್ಟ್ 31 ರಂದು ಪ್ರಕಟಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: