ಮೈಸೂರು

ಉಪಚುನಾವಣೆ ಹಿನ್ನೆಲೆ : 6ಪ್ಯಾರಾ ಮಿಲಿಟರಿ ತುಕಡಿಗಳು ಭಾಗಿ ;ಡಿ.ರಂದೀಪ್

ಉಪಚುನಾವಣೆ ಶಾಂತಿಯುತವಾಗಿ ಹಾಗೂ ನ್ಯಾಯಸಮ್ಮತ, ಮುಕ್ತವಾಗಿ ನಡೆಯಲು  250 ಮಂದಿಯನ್ನು ಒಳಗೊಂಡ  6 ಪ್ಯಾರಾ ಮಿಲಿಟರಿ ತುಕುಡಿಗಳು ಚುನಾವಣೆ ಕಾರ್ಯದಲ್ಲಿ ಭಾಗಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಿ. ರಂದೀಪ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಲ್ವರು ವಿಶೇಷ ಚುನಾವಣಾ ವೀಕ್ಷಕರನ್ನು ನೇಮಿಸಲಾಗಿದೆ.  ಈಗಾಗಲೇ ಚುನಾವಣಾ ಪ್ರಯುಕ್ತ ಹಂಚಲು ಕೊಂಡೊಯ್ಯಲಾಗುತ್ತಿದ್ದ ಉಡುಗೊರೆಗಳು, ಮದ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು ಕ್ರಮಕೈಗೊಳ್ಳಲಾಗಿದೆ. ಕಾಂಗ್ರೆಸ್-ಬಿಜೆಪಿ ಪಕ್ಷಗಳ ಅಭ್ಯರ್ಥಿಗಳ ಮೇಲೆ ನೀತಿ ಸಂಹಿತೆ ಉಲ್ಲಂಘನೆಯ ದೂರುಗಳು ದಾಖಲಾಗಿವೆ. ಮುಂದಿನ ದಿನಗಳಲ್ಲಿಯೂ ಈ ಕುರಿತು ಗಮನ ಹರಿಸಲಾಗುತ್ತಿದ್ದು, ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎಪ್ರಿಲ್ 7ರಂದು ನಂಜನಗೂಡಿನಲ್ಲಿ ಜಾತ್ರೆ ನಡೆಯಲಿದ್ದು, ಭದ್ರತೆಗಾಗಿ ವಿಶೇಷ ಸಿಬ್ಬಂದಿಗಳನ್ನು ನೇಮಿಸಲಾಗುವುದು. 35 ಕಡೆ ಸಿಸಿಕ್ಯಾಮರಾ ಅಳವಡಿಸಲಾಗುವುದು ಎಂದರು. ಕಾ.ರಾಮೇಶ್ವರಪ್ಪ ವರ್ಗಾವಣೆ ಕುರಿತು ಸ್ಪಷ್ಟನೆ ನೀಡಿದ ಅವರು ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ತಾತ್ಕಾಲಿಕವಾಗಿ ವರ್ಗಾವಣೆ ಮಾಡಲಾಗಿದೆ ಎಂದರು.

ಎಪ್ರಿಲ್ 2 ರಿಂದ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಮೊದಲ ಹಂತದ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿ. ರಂದೀಪ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗಳು ಉಪಸ್ಥಿತರಿದ್ದರು.  (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: