ಪ್ರಮುಖ ಸುದ್ದಿ

ರಾಜ್ಯದಲ್ಲಿ 6,706 ಪ್ರಕರಣ ಪತ್ತೆ : 2 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ರಾಜ್ಯ( ಬೆಂಗಳೂರು)ಆ.14:- ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮುಂದುವರಿದಿದ್ದು ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ. ರಾಜ್ಯದಲ್ಲಿ 6,706 ಪ್ರಕರಣ ಪತ್ತೆಯಾಗಿದ್ದು 103 ಮಂದಿ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6,706 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು 103 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,613ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು 8,609 ಮಂದಿ ಗುಣಮುಖರಾಗಿದ್ದಾರೆ. 2,03,200 ಕೊರೋನಾ ಪ್ರಕರಣಗಳ ಪೈಕಿ 1,21,242 ಮಂದಿ ಡಿಸ್ಚಾರ್ಜ್ ಆಗಿದ್ದು ಇನ್ನು 78,336 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ 1,893 ಮಂದಿ ಕೊರೋನಾಗೆ ತುತ್ತಾಗಿದ್ದು ಸೋಂಕಿತರ ಸಂಖ್ಯೆ 81,733ಕ್ಕೆ ಏರಿಕೆಯಾಗಿದೆ. ಇನ್ನು 22 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1,338ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 33,150 ಸಕ್ರೀಯ ಪ್ರಕರಣಗಳಿವೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: