ಪ್ರಮುಖ ಸುದ್ದಿಮೈಸೂರು

ನಾಳೆ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಆ.13:-  ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆಗಸ್ಟ್ 14 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 10  ಗಂಟೆಗೆ ಮೈಸೂರಿಗೆ ಆಗಮಿಸುವ ಅವರು ಬೆಳಿಗ್ಗೆ 10.30 ಕ್ಕೆ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಹಾನಿಗಳು ಮತ್ತು ಕೈಗೊಂಡಿರುವ ಕ್ರಮಗಳು ಹಾಗೂ ಮುಂಜಾಗ್ರತ ಕ್ರಮಗಳನ್ನು ಕುರಿತಂತೆ ಸಭೆ ನಡೆಸುವರು.

ಮಧ್ಯಾಹ್ನ 1  ಗಂಟೆಗೆ ಬೆಡಗಲುಪುರದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ ಮಾಡುವರು.

ಮಧ್ಯಾಹ್ನ 2.30ಕ್ಕೆ ಹೆಚ್.ಡಿ.ಕೋಟೆ ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಪ್ರೋತ್ಸಾಹಧನ ವಿತರಣೆ ಮಾಡುವರು.

ಸಂಜೆ 4.30ಕ್ಕೆ ಕೆ.ಆರ್.ನಗರದ ಟಿ.ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಪ್ರೋತ್ಸಾಹಧನ ವಿತರಣೆ ಮಾಡುವರು.

ಅಗಸ್ಟ್ 15  ಶನಿವಾರ ಬೆಳಿಗ್ಗೆ 9ಕ್ಕೆ ಮೈಸೂರಿನ ಬನ್ನಿಮಂಟಪ ಪಂಜಿನ ಕವಾಯಿತು ಮೈದಾನದಲ್ಲಿ 7ನಡೆಯಲಿರುವ 4ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸುವರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: