ಮೈಸೂರು

ಕಪಿಲಾ ನದಿಗೆ ಹಾರಿ  ವ್ಯಕ್ತಿ ಆತ್ಮಹತ್ಯೆ

ಮೈಸೂರು,ಆ.14:- ಕಪಿಲಾ ನದಿಗೆ ಹಾರಿ  ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ನಗರದ ದೇವರಾಜ ಅರಸು ಸೇತುವೆ ಬಳಿ ನಡೆದಿದೆ.

ಮೃತರನ್ನು ಶ್ರೀಕಂಠೇಶ್ವರ ದೇವಾಲಯದ ಮಾಜಿ ನೌಕರ ಚಂದ್ರಶೇಖರ(67)ಎಂದು ಗುರುತಿಸಲಾಗಿದೆ. ಇವರು ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದು, ಮೃತರ ಪುತ್ರ ಕಾಂತರಾಜು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಸಿಪಿಐ ಲಕ್ಷ್ಮಿಕಾಂತ್ ತಳವಾರ್, ಗ್ರಾಮಾಂತರ ಠಾಣೆ ಎಸ್ ಐ ಸತೀಶ್ ಭೇಟಿ ನೀಡಿ ಮಹಜರು ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: