ಪ್ರಮುಖ ಸುದ್ದಿ

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್

ರಾಜ್ಯ(ಬೆಂಗಳೂರು)ಆ.14:- ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 80 ಮಂದಿ ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು  ಇದೀಗ ಬಂಧಿತರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

ಸಿಸಿಬಿ ಮತ್ತು ಕೆಎಸ್ ಆರ್ ಪಿ ಭದ್ರತೆಯಲ್ಲಿ ರಾತ್ರೋರಾತ್ರಿ ಕೆಎಸ್ ಆರ್ ಟಿಸಿ ಬಸ್ ಮೂಲಕ ಆರೋಪಿಗಳನ್ನು ಶಿಫ್ಟ್ ಮಾಡಲಾಗಿದೆ.  ಕಳೆದ ಎರಡು ದಿನಗಳ ಹಿಂದೆ ಕಿಡಿಗೇಡಿಗಳು ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ    ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ನಿವಾಸ ಹಾಗೂ ಪಕ್ಕದ ಮನೆ ಕೂಡ ಭಸ್ಮವಾಗಿದೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: