ಮೈಸೂರು

ಕಬಿನಿ ಜಲಾಶಯ ಭರ್ತಿಯಾಗಲು  ಒಂದು ಅಡಿ ಮಾತ್ರ ಬಾಕಿ

ಮೈಸೂರು,ಆ.14:- ಇತ್ತೀಚೆಗೆ ಕೇರಳದ ವೈನಾಡಿನಲ್ಲಿ  ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್. ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಜಲಾಶಯ ಭರ್ತಿಯಾಗಲು  ಒಂದು ಅಡಿ ಮಾತ್ರ ಬಾಕಿ ಇದೆ.

ಕಬಿನಿ ಜಲಾಶಯಕ್ಕೆ 16,112  ಕ್ಯೂಸೆಕ್ ನೀರು ಬರುತ್ತಿದ್ದು, ಜಲಾಶಯದಿಂದ ಒಟ್ಟು 15,625 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ನಾಲೆಗಳಿಗೆ 625 ಕ್ಯೂಸೆಕ್, ನದಿಗೆ 15,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ ಆಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 2283.02 ಅಡಿ ಇದೆ.

ಒಟ್ಟು 19.52 ಟಿ. ಎಂ. ಸಿ. ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಇಂದು 18.87 ಟಿ. ಎಂ.ಸಿ ನೀರು ಸಂಗ್ರಹವಾಗಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆನೀರು ಹರಿದು ಬಂದಿದ್ದು ಕಪಿಲಾ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: