ಪ್ರಮುಖ ಸುದ್ದಿಮೈಸೂರು

ಕೆ.ಜಿ ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ನ ಪಾಪದ ಕೂಸು : ಎಂಎಲ್ ಸಿ ಹೆಚ್.ವಿಶ್ವನಾಥ್ ಆರೋಪ

ಮೈಸೂರು,ಆ.14:- ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ನ ಪಾಪದ ಕೂಸು. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಕಾರಣ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಆರೋಪಿಸಿದರು.

ಮೈಸೂರಿನಲ್ಲಿಂದು   ಬೆಂಗಳೂರಿನ ಕೆ.ಜಿ ಹಳ್ಳಿ ಗಲಭೆ ಪ್ರಕರಣ ಕುರಿತು  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ  ಹೆಚ್.ವಿಶ್ವನಾಥ್, ಗಲಭೆಗೂ ಬಿಜೆಗೂ ಯಾವುದೇ ಸಂಬಂಧ ಇಲ್ಲ. ಇದು ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘಟನೆಗೂ ನಡೆಯುತ್ತಿರುವ ಗಲಭೆ. ಸಿಎಎ ಹೋರಾಟದಲ್ಲಿ ಪ್ರಚೋದನಕಾರಿ ಭಾಷಣಗಳು ಇದಕ್ಕೆಲ್ಲಾ ಕಾರಣ. ವಿಪಕ್ಷಗಳು ಜನರನ್ನು ಉದ್ರೇಕಗೊಳಿಸಿದ್ದು ಇನ್ನೂ ಬಿಸಿ ಕೆಂಡವಾಗಿ ಉಳಿದಿದೆ. ಆ ಕೆಂಡವನ್ನೇ ಇಟ್ಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಶಾಸಕ ಜಮೀರ್ ಅಹ್ಮದ್  ವಿರುದ್ಧ  ಅವರು ಜಮೀರ್ ಅಹಮ್ಮದ್ ಬೆಂಕಿ ಬಿದ್ದ ಮನೆಗೆ ಹೋಗಿ ಸಾಂತ್ವನ ಹೇಳಿಲ್ಲ. ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಪಾದರಾಯನಪುರ ವಿಚಾರದಲ್ಲಿ ಜೈಲಿಗೆ ಹೋಗಿ ಬಂದವರನ್ನು ಮಾಲೆ ಹಾಕಿ ಸ್ವಾಗತಿಸಿದರು. ಇವರೇನು ಸ್ವಾತಂತ್ರ್ಯ ಹೋರಾಟ ಮಾಡಲು ಹೋಗಿದ್ರಾ  ಎಂದು ಪ್ರಶ್ನಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: