ಮೈಸೂರು

ಬಡಗಲಪುರ ಗ್ರಾಮದಲ್ಲಿ 130 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಮೈಸೂರು,ಆ.14:- ಸರಗೂರು ತಾಲ್ಲೂಕು ಬಡಗಲಪುರ ಗ್ರಾಮದಲ್ಲಿ 130 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಉದ್ಘಾಟಿಸಿದರು.

ಆಸ್ಪತ್ರೆಯು ಸುಸಜ್ಜಿತ ಸೌಲಭ್ಯಗಳಿಂದ ಕೂಡಿದೆ. ಶಸ್ತ್ರ ಚಿಕಿತ್ಸಾ ಕೊಠಡಿ, ಪ್ರಸೂತಿ ಕೇಂದ್ರ, ಸ್ತ್ರೀ ಮತ್ತು ಪುರುಷರಿಗೆ 3 ಹಾಸಿಗೆಗಳ ಪ್ರತ್ಯೆಕ ವಾರ್ಡ್, ಡ್ರೆಸ್ಸಿಂಗ್ ರೂಂ, ಪ್ರಯೋಗಾಲಯ, ಹೊರ ರೋಗಿ ವಿಭಾಗ, ಔಷಧಿ ಶೇಖರಣೆ ಮತ್ತು ಔಷಧಿ ವಿತರಣೆ ಕೇಂದ್ರ ಕೊಠಡಿ, ಶೌಚಾಲಯ, ಕುಡಿಯುವ ನೀರಿಗಾಗಿ ಬೋರ್ ವೆಲ್ ವ್ಯವಸ್ಥೆ, 5 ಕೆ.ವಿ.ಎ. ಜನರೇಟರ್ ಸೇರಿದಂತೆ ಹಲವು ಸೌಲಭ್ಯಗಳಿದ್ದು ಉಪಯೋಗವಾಗಲಿದೆ ಎಂದರು.

ಬಳಿಕ ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮಾತನಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಿ. ಅತೀ ಶೀಘ್ರದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು ಭರವಸೆ ನೀಡಿದರು.

ಆರೋಗ್ಯ ಕೇಂದ್ರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ. ಗಡಿಭಾಗದಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಹೆಚ್ಚಿನ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಮುಂದಿನ ಅವಧಿಗಳಲ್ಲಿ ತಾಲ್ಲೂಕಿನಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತವೆ ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಂ ಅವರು ಮಾತನಾಡಿ ಕೋವಿಡ್ 19 ತಡೆಗಟ್ಟಲು ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ದಯಮಾಡಿ ಪಾಲಿಸಬೇಕು ಎಂದು ಮನವಿ ಮಾಡಿಕೊಂಡರು.

ಇದೇ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡಿದ ತಿಮ್ಮಮ್ಮ ಮತ್ತು ಶಿವಣ್ಣೇಗೌಡರ ಮಕ್ಕಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್. ಹುಣಸೂರು ಉಪವಿಭಾಗಾಧಿಕಾರಿ ವೀಣಾ, ಹೆಚ್.ಡಿ.ಕೋಟೆ ತಾಲ್ಲೂಕಿನ ತಹಶೀಲ್ದಾರ್ ಆರ್.ಮಂಜುನಾಥ್. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: