ಪ್ರಮುಖ ಸುದ್ದಿಮೈಸೂರು

ಕೆ‌.ಆರ್‌.ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಆಗಸ್ಟ್ 21 ರಂದು ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ

ಮೈಸೂರು,ಆ.16:-  ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಭರ್ತಿಯಾಗಿರುವ ಕೆ‌.ಆರ್‌.ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಆಗಸ್ಟ್ 21 ರಂದು ಸಿಎಂ ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಚರಣೆ, ತಲಕಾಡು ಪಂಚಲಿಂಗ ದರ್ಶನದ ಬಗ್ಗೆ ಇದುವರೆಗೂ ಚರ್ಚೆಯಾಗಿಲ್ಲ. ಕೊರೋನಾ ಹಾಗೂ ಪ್ರವಾಹ ಹೆಚ್ಚಾಗಿರುವ ಹಿನ್ನೆಲೆ ಆ ವಿಚಾರ ಪ್ರಸ್ತಾಪವಾಗಿಲ್ಲ. ಆಗಸ್ಟ್ 20 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದರು.

ಹಾಗೆಯೇ ಮುಖ್ಯಮಂತ್ರಿ ಅವರೇ ಮೈಸೂರಿಗೆ ಬಂದಾಗ ಈ ಬಗ್ಗೆ ತಿಳಿಸಲಿದ್ದಾರೆ. ಅಗಸ್ಟ್ 21 ರಂದು ಬಂದು ಕೆ.ಆರ್ ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.

ಇಂದು ಮಾಧ್ಯಮ ಹೇಳಿಕೆ ನೀಡಿರುವ ಅವರು ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿಗಳಾದ   ಬಿಎಸ್ ಯಡಿಯೂರಪ್ಪ ಅವರು ಇದೇ ಆಗಸ್ಟ್ 21ರಂದು ಬಾಗಿನವನ್ನು ಅರ್ಪಿಸಲಿದ್ದಾರೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: