ಮೈಸೂರು

ಎಸ್ ಡಿಪಿಐ ಮತ್ತು ಪಿಎಫ್ ಐ ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಮೈಸೂರು,ಆ.18:- ದೇಶದ್ರೋಹಿ ಸಂಘಟನೆಗಳಾದ ಎಸ್ ಡಿಪಿಐ ಮತ್ತು ಪಿಎಫ್ ಐ ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಇಂದು ಹಿಂದೂ ಜಾಗರಣ ವೇದಿಕೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಪದೇ ಪದೇ ಹಿಂದೂಗಳ ಮೇಲೆ ದಾಳಿ ನಡೆಸುತ್ತಿರುವ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿ,ಜೆ.ಹಳ್ಳಿಯಲ್ಲಿ ಏಕಾಏಕಿ ಸ್ಥಳೀಯ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಮತ್ತು ನೆರೆಹೊರೆಯ ಹತ್ತಾರು ಹಿಂದೂಮನೆ ಮತ್ತು ವಾಹನಗಳ ಮೇಲೆ ದಾಳಿ ಮಾಡಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾನಿ ಮಾಡಿ ಕರ್ತವ್ಯ ನಿರತ ಪೊಲೀಸರ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸುವುದನ್ನು ಖಂಡಿಸಿ, ಅನೇಕ ಹಿಂದೂಗಳ ಮನೆಗಳ ಮೇಲೆ ಪೈಶಾಚಿಕ ದಾಳಿ ನಡೆಸಿರುವುದನ್ನು ಖಂಡಿಸಿ ಮನವಿ ಸಲ್ಲಿಸಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆಯ ಗಿರೀಶ್ ತಿಳಿಸಿದರು.

ಇಂತಹ ದುಷ್ಕೃತ್ಯಗಳಿಗೆ ಕಾರಣಕರ್ತರಾದ  ವ್ಯಕ್ತಿಗಳನ್ನು  ಬಂಧಿಸಿ ಶಿಕ್ಷೆ ವಿಧಿಸಬೇಕು. ಇಂತಹ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರಲ್ಲದೇ ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಕ್ರಮವಹಿಸಬೇಕು ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: