ದೇಶ

ಜಾರ್ಖಂಡ್ ಆರೋಗ್ಯ ಸಚಿವರಿಗೆ ಕೊರೊನಾ ಪಾಸಿಟಿವ್

ರಾಂಚಿ,ಆ.19-ಜಾರ್ಖಂಡ್ ನ ಆರೋಗ್ಯ ಸಚಿವ ಬನ್ನಾ ಗುಪ್ತ ಅವರಿಗೆ ಕೋವಿಡ್ 19 ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

ನನಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ನಾನು ಚಿಕಿತ್ಸೆಗೆ ಒಳಗಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕಕ್ಕೆ ಬಂದಿರುವ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ನಿನ್ನೆಯಷ್ಟೇ ಉತ್ತರಪ್ರದೇಶದ ಆರೋಗ್ಯ ಸಚಿವ ಅತುಲ್ ಗರ್ಗ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಕೊರೊನಾ ವೈರಸ್ ಸೋಂಕು ಕೇಂದ್ರ ಸಚಿವರು, ಕೆಲ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರನ್ನು ಕಾಡುತ್ತಿದೆ. (ಎಂ.ಎನ್)

 

Leave a Reply

comments

Related Articles

error: