ಸುದ್ದಿ ಸಂಕ್ಷಿಪ್ತ

ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೈಸೂರು.ಆ .19 :- ಸಾಲಿಗ್ರಾಮ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ 2020-21 ನೇ ಸಾಲಿನ ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಐ.ಸಿ.ಟಿ.ಎಸ್.ಎಂ ಮತ್ತು ಎಂ.ಆರ್.ಎ.ಸಿ. ಎಂಬ ಐದು ವೃತ್ತಿ ವಿಭಾಗಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಇಲಾಖೆಯ ವೆಬ್‍ಸೈಟ್ www.emptrg.kar.nic.in ನಲ್ಲಿ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಸಾಲಿಗ್ರಾಮದ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: