ಕರ್ನಾಟಕ

ಸೆ.21 ರಿಂದ ರಾಜ್ಯದ ಮುಂಗಾರು ಅಧಿವೇಶನ

ಬೆಂಗಳೂರು,ಆ.20-ಕೊರೊನಾದಿಂದಾಗಿ ಮುಂದೂಡಲಾಗಿದ್ದ ರಾಜ್ಯದ ಮುಂಗಾರು ಅಧಿವೇಶನ ಸೆಪ್ಟೆಂಬರ್ 21ರಿಂದ 30 ರವರೆಗೆ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಧುಸ್ವಾಮಿ ಅವರು ಈ ವಿಚಾರನ್ನು ತಿಳಿಸಿದ್ದಾರೆ.

ಈ ಹಿಂದೆ ಜೂನ್ ತಿಂಗಳಿನಲ್ಲಿ ಮಳೆಗಾಲದ ಅವೇಶನ ನಡೆಸಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ವಿಧಾನಸೌಧ ಹೊರತುಪಡಿಸಿ ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ಸಭೆ ನಡೆಸಲು ಸ್ಥಳ ಗುರುತಿಸುವ ಕಾರ್ಯ ನಡೆಸಲಾಗಿತ್ತು. ಅಂತಿಮವಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: