ದೇಶಪ್ರಮುಖ ಸುದ್ದಿ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗೆ ಕೋವಿಡ್ ಪಾಸಿಟಿವ್

ನವದೆಹಲಿ,ಆ.20-ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ. ಕೋವಿಡ್ ರೋಗ ಲಕ್ಷಣಗಳು ಕಂಡು ಬಂದ ಕಾರಣ ಪರೀಕ್ಷೆಗೆ ಒಳಗಾಗಿದ್ದೆ. ವರದಿ ಪಾಸಿಟಿವ್ ಎಂದು ಬಂದಿದೆ. ವೈದ್ಯರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಒಂದು ವಾರದಿಂದೀಚೆಗೆ ಯಾರ್ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ. ಎಲ್ಲರೂ ಆರೋಗ್ಯದಿಂದಿರಿ ಮತ್ತು ಕಾಳಜಿ ವಹಿಸಿ ಎಂದು ಟ್ವೀಟ್ ಮಾಡಿದ್ದಾರೆ. (ಎಂ.ಎನ್)

Leave a Reply

comments

Related Articles

error: