ಪ್ರಮುಖ ಸುದ್ದಿಮೈಸೂರು

ಕಬಿನಿ ಜಲಾಶಯಕ್ಕೆ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ : ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿ ಪೂಜೆ

ಮೈಸೂರು,ಆ.21:- ಮೈಸೂರು ಜಿಲ್ಲೆಯ ಹೆಚ್ .ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಾಗಿನ ಅರ್ಪಿಸಿದರು.
ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಮುಖ್ಯಮಂತ್ರಿಗಳ ಜೊತೆ ಸಚಿವರಾದ ರಮೇಶ್ ಜಾರಕಿಹೊಳಿ, ಎಸ್.ಟಿ.ಸೋಮಶೇಖರ್, ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಸಿಎಂ ರಾಜ್ಯಾದ್ಯಂತ ಉತ್ತಮವಾಗಿ ಮಳೆ ಆಗಿದೆ. ಇದರಿಂದಾಗಿ ಅಂತರ್ಜಲ ಮಟ್ಟ ಕುಸಿಯುವುದು ತಪ್ಪಿದೆ. ಎಲ್ಲ ಕಡೆ ಬಿತ್ತನೆ ಚನ್ನಾಗಿ ಆಗುತ್ತಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದೇನೆ. ಜಲಾಶಯಗಳು ತುಂಬಿರುವುದು ನಮ್ಮ ಸುದೈವ ಎಂದರು.
ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ಪರಿಹಾರ ಘೋಷಣೆ ಮಾಡಿದ್ದೇವೆ. ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ದಸರಾ ಮಹೋತ್ಸವ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಪುನರುಚ್ಚರಿಸಿದರು. ಸರಳವಾಗಿ ಆಚರಣೆ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ದಸರಾ ರೂಪುರೇಷೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ದಸರಾ ಉನ್ನತ ಮಟ್ಟದ ಸಮಿತಿ ಸಭೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಮಾಡುತ್ತೇವೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: