ಪ್ರಮುಖ ಸುದ್ದಿಮೈಸೂರು

ವೈದ್ಯರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಸೋಮಶೇಖರ್

ಮೈಸೂರು,ಆ.24:- ಕಳೆದ ನಾಲ್ಕೈದು ತಿಂಗಳಿನಿಂದ ಕೋವಿಡ್ -19 ಮಹಾಮಾರಿ ವಿರುದ್ಧ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಜಿಲ್ಲಾಡಳಿತ ಸೇರಿದಂತೆ ಅನೇಕ ಇಲಾಖೆಗಳ ತಂಡದವರು ಅವಿರತವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಇದು ಎಂದಿಗೂ ಸ್ಮರಣೀಯವಾಗಿದ್ದು, ಯಾರೂ ಎಂದೂ ಸಹ ಇದನ್ನು ಮರೆಯಲಾಗದು ಎಂದಿರುವ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೈದ್ಯರುಗಳಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.
ಮಾಧ್ಯಮ ಹೇಳಿಕೆ ನೀಡಿರುವ ಅವರು ಕೋವಿಡ್ ಸಂದರ್ಭದಲ್ಲಿ ವೈದ್ಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಈ ಎಲ್ಲ ಸಮಸ್ಯೆಗಳು ಸರ್ಕಾರದ ಅರಿವಿಗೆ ಬಂದಿದ್ದು, ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬೇಡಿಕೆಗಳನ್ನು ಈಡೇರಿಸಲು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್ ಪಡೆದಿರುವ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ಜೊತೆಗೆ ರಾಜ್ಯ ಮತ್ತು ಮೈಸೂರು ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹೀಗಾಗಿ ಕೋವಿಡ್ ಸನ್ನಿವೇಶದಲ್ಲಿ ಜನರ ಆರೈಕೆಗೆ ಮತ್ತೆ ಮುಂದಾಗುತ್ತಿರುವುದಕ್ಕೆ ಅಭಿನಂದನೆಯನ್ನು ತಿಳಿಸುತ್ತೇನೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: