ಮೈಸೂರು

ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಾಗುವುದು : ಗೋ.ಮಧುಸೂದನ್

ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲು ಬೆಂಗಳೂರಿನಿಂದ ಆಗಮಿಸಿದ ಐಟಿ-ಬಿಟಿ ಉದ್ಯೋಗಿಗಳನ್ನು ಬಿಜೆಪಿ ನಗರ ಮಾಹಿತಿ ತಂತ್ರಜ್ಞಾನ ಪ್ರಕೋಷ್ಟದ ವತಿಯಿಂದ ಶನಿವಾರ ಬೆಳಿಗ್ಗೆ ಮೈಸೂರು ನಗರ ಕಚೇರಿಯಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭ ಮಾಧ್ಯಮದವರೊಂದಿಗೆ  ರಾಜ್ಯ ಬಿಜೆಪಿ  ವಕ್ತಾರ ಗೋ.ಮಧುಸೂದನ್  ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದುರಂಹಕಾರಕ್ಕೆ ತಕ್ಕ ಪಾಠ ಕಲಿಸಲು ಬಿಜೆಪಿ ಪಣತೊಟ್ಟಿದೆ. ಇಂದಿನಿಂದ ಎರಡು ದಿನಗಳ ಕಾಲ ಐಟಿ-ಬಿಟಿ ಉದ್ಯೋಗಿಗಳು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ,ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಹೆಚ್.ವಿ.ರಾಜೀವ್, ನಗರ (ಜಿಲ್ಲಾ) ಮಾಹಿತಿ ತಂತ್ರಜ್ಞಾನ ಪ್ರಕೋಷ್ಟದ ಸಂಚಾಲಕ ಗುರುಪ್ರಸಾದ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: