ಕರ್ನಾಟಕದೇಶಪ್ರಮುಖ ಸುದ್ದಿ

ಕೇಂದ್ರ ದಿಂದ ರಾಜ್ಯ ಸರ್ಕಾರಕ್ಕೆ 1,782ಕೋಟಿ ರೂಪಾಯಿ ಬರಪರಿಹಾರ ಬಿಡುಗಡೆ

ನವದೆಹಲಿ: ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಶನಿವಾರ 1,782 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ.
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕರ್ನಾಟಕಕ್ಕೆ 1,782 ಕೋಟಿ, ತಮಿಳುನಾಡಿಗೆ 2014 ಕೋಟಿ ಹಾಗೂ ಉತ್ತರಾಖಂಡ್ ಗೆ 209 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಈ ಹಿಂದೆ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದ ಸಂದರ್ಭದಲ್ಲಿ ಬರ ಪರಿಹಾರ ರೂಪದಲ್ಲಿ 4,702 ಕೋಟಿ ರೂ ಬಿಡುಗಡೆಗೆ ಮನವಿ ಮಾಡಿದ್ದರು.
ಕರ್ನಾಟಕ ಹಾಗೂ ಉತ್ತರಾಖಂಡದಲ್ಲಿ ಸಂಭವಿಸಿದ್ದ ಭೀಕರ ಬರ ಹಾಗೂ ಪ್ರವಾಹ ಕುರಿತಂತೆ ಆಂತರಿಕ ಸಚಿವಾಲಯದ ತಂಡ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪಡೆ ನಿಧಿ ಹಾಗೂ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ 4,702 ಕೋಟಿ ರೂಪಾಯಿ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: