ಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದುವರಿದ ಕೊರೋನಾ ಅಬ್ಬರ : 8,161 ಮಂದಿಗೆ ಪತ್ತೆ; 148ಮಂದಿ ಬಲಿ

ರಾಜ್ಯ(ಬೆಂಗಳೂರು)ಆ.26:- ರಾಜ್ಯದಲ್ಲಿ ಕೊರೋನಾ ವೈರಸ್ ಮಹಾಮಾರಿ ಮುಂದುವರಿದಿದ್ದು ಕಳೆದ 24 ಗಂಟೆಯಲ್ಲಿ ಕೊರೋನಾ 8,161 ಮಂದಿಗೆ ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,91,826ಕ್ಕೇರಿಕೆಯಾಗಿದೆ.
ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 148 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

2,91,826 ಪ್ರಕರಣಗಳ ಪೈಕಿ 2,04,439 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 82, 410 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 61 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 148 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 4,958ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,294 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 1,12,087ಕ್ಕೆ ಏರಿಕೆಯಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: