ಮೈಸೂರು

ಕಾಂಗ್ರೆಸ್ ನಿಂದ ಹಣ ಹಂಚಿಕೆ : ಸ್ಥಳಕ್ಕೆ ಪೊಲೀಸರ ಆಗಮನ

ಕಾಂಗ್ರೆಸ್ ಪಕ್ಷದಿಂದ ಕಲ್ಯಾಣ ಮಂಟಪವೊಂದಲ್ಲಿ ಮತದಾರರಿಗೆ ಹಣ ಹಂಚುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಯಾಣ ಮಂಟಪಕ್ಕೆ ಮುತ್ತಿಗೆ ಹಾಕಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಪುಟ್ಟಮ್ಮ ರಾಮಯ್ಯ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ  ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಇದರಿಂದ ಕಲ್ಯಾಣ ಮಂಟಪದಲ್ಲಿದ್ದವರು ದಿಕ್ಕಾಪಾಲಾಗಿ ಓಡಿಹೋದರು.ಘಟನಾ ಸ್ಥಳಕ್ಕೆ ಪೊಲೀಸರ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.  ಕಲ್ಯಾಣ ಮಂಟಪದ ಆವರಣದಲ್ಲಿ ನಿಲ್ಲಿಸಿದ್ದ ಹದಿನೈದಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್, ಡಿಸಿಪಿ ಎಚ್.ಟಿ ಶೇಖರ್ ಆಗಮಿಸಿದ್ದು ಪರಿಶೀಲನೆ ನಡೆಸಿದರು. ತಡವಾಗಿ ಆಗಮಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: