ಕರ್ನಾಟಕ

ಹುಬ್ಬಳ್ಳಿ: ಹಳೆ ವೈಷ್ಯಮಕ್ಕೆ ಇಬ್ಬರು ಯುವಕರ ಹತ್ಯೆ

ಹುಬ್ಬಳ್ಳಿ,ಆ.27-ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಇಬ್ಬರು ಯುವಕರನ್ನು ಕೊಲೆ ಮಾಡಿರುವ ಘಟನೆ ನಗರದ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಮಂಜುನಾಥ ಕಬ್ಬಿನ ಹಾಗೂ ನಿಯಾಜ್ ಕೊಲೆಯಾದ ಯುವಕರು. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಇಂದು ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: