ಕರ್ನಾಟಕ

ಚಿತ್ರದುರ್ಗ: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

ಚಿತ್ರದುರ್ಗ,ಆ.27-ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಲಿಂಗಸುಗೂರು ತಾಲ್ಲೂಕಿನ ಗೌಡೂರು ಗ್ರಾಮದ ಸಾಯಿಬಣ್ಣ (35), ವೆಂಕಟೇಶ್ (30) ಮೃತಪಟ್ಟವರು. ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿ ಗೇಟ್ ಸಮೀಪದ ಬೆಳಗಾವಿ-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಆನಂದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದದು ಬೆಳಿಗ್ಗೆ ಕಾರು ಚಳ್ಳಕೆರೆ ಕಡೆಯಿಂದ ಹಿರಿಯೂರಿಗೆ ಬರುತ್ತಿತ್ತು. ಸಂಜನಾ ಟ್ರಾವೆಲ್ಸ್ ಬಸ್ ಹಿರಿಯೂರು ಕಡೆಯಿಂದ ಚಳ್ಳಕೆರೆಗೆ ಹೋಗುತ್ತಿದ್ದಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: