ಪ್ರಮುಖ ಸುದ್ದಿಮೈಸೂರು

ಚುನಾವಣಾಧಿಕಾರಿಗಳು ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ : ಶೋಭಾ ಕರಂದ್ಲಾಜೆ ಆರೋಪ

ಅಧಿಕಾರಿಗಳು ಪ್ರಜಾತಂತ್ರ ವ್ಯವಸ್ಥೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ.ತಕ್ಷಣ ಕೇಂದ್ರದ ಅರೆಸೇನಾ ಪಡೆ ನಂಜನಗೂಡಿಗೆ ಬರಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅರೆಸೇನಾ ಪಡೆ ಬರದಿದ್ದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಯಲು ಸಾಧ್ಯವಿಲ್ಲ.ಶನಿವಾರ  ಬಿ.ಎಸ್.ಯಡಿಯೂರಪ್ಪ ಪ್ರಚಾರ ಮಾಡುತ್ತಿದ್ದ ಮೈಕ್ ಇದ್ದ ವಾಹನವನ್ನು ಜಪ್ತಿ ಮಾಡಿದ್ದಾರೆ. ಯಾವ ಕಾನೂನಿನ ಅಡಿಯಲ್ಲಿ ಅದನ್ನು ಜಪ್ತಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಪೊಲೀಸ್ ಹಾಗೂ ಚುನಾವಣಾ ಅಧಿಕಾರಿಗಳು ಮುಖ್ಯಮಂತ್ರಿಗಳು ಹಾಗೂ ಪರಮೇಶ್ವರ್ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನವರು ಮೈಸೂರಿನ ಪುಟ್ಟಮ್ಮ ರಾಮಯ್ಯ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಹಣ ಹಂಚಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದೇವೆ. ಆದರೆ ಕಮಿಷನರ್ ಸ್ಥಳಕ್ಕೆ ಬಂದು ಚುನಾವಣಾ ಅಧಿಕಾರಿಗಳು ಬರಬೇಕೆಂದು ಹೇಳಿದರು.  ಮುಖ್ಯಮಂತ್ರಿಗಳ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವದ ಹರಣವಾಗುತ್ತಿದೆ. ಪೊಲೀಸರು ಬಿಜೆಪಿ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಅರೆ ಮೀಸಲು ಪಡೆಯನ್ನು ಕರೆಸಿಕೊಳ್ಳಬೇಕು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದರು. ಈ ಸಂದರ್ಭ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: