ಕರ್ನಾಟಕಪ್ರಮುಖ ಸುದ್ದಿ

ಸಚಿವ ಕೆ.ಎಸ್.ಈಶ್ವರಪ್ಪಗೆ ಕೋವಿಡ್ ಸೋಂಕು ದೃಢ

ಶಿವಮೊಗ್ಗ,ಸೆ.1-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೋವಿಡ್-19 ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಿನ್ನೆಯಷ್ಟೇ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು ತಗುಲಿತ್ತು. ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೈನ್ ಆಗಲಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರರಿಗೂ ಸೋಮವಾರ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಅವರು ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. (ಎಂ.ಎನ್)

 

Leave a Reply

comments

Related Articles

error: