ಮೈಸೂರು

ನಂಜನಗೂಡಿನಲ್ಲಿ ಬಿಜೆಪಿ ಮುಖಂಡರ ರೋಡ್ ಶೋ

ನಂಜನಗೂಡಿನಲ್ಲಿ ಬಿಸಿಲಿನ ಝಳವನ್ನೂ ಲೆಕ್ಕಿಸದೇ ರಾಜಕೀಯ ನಾಯಕರು ಭರ್ಜರಿ ಪ್ರಸಾರ ನಡೆಸುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾನುವಾರ ಮಧ್ಯಾಹ್ನ ರೋಡ್ ಶೋ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಕಾಂಗ್ರೆಸ್ ಆಡಳಿತದ ಪೊಳ್ಳು ಆಶ್ವಾಸನೆಗಳನ್ನು ನೋಡಿ ಜನತೆ ಬೇಸತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ದುರಾಡಳಿತ ಸಾಕಾಗಿದೆ. ಜನತೆ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಈ ಬಾರಿ ಬಿಜೆಪಿಗೆ ಅಮೂಲ್ಯ ಮತವನ್ನು ನೀಡಿ ಗೆಲ್ಲಿಸುತ್ತಾರೆಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಸಂದರ್ಭ ವಿಧಾನಪರಿಷತ್ ನಾಯಕ  ಈಶ್ವರಪ್ಪ, ಕೇಂದ್ರ ಸಚಿವ ಅನಂತಕುಮಾರ್, ಮಾಜಿ ಸಚಿವ ಸೋಮಣ್ಣ, ವಿಧಾನ ಪರಿಷತ್ ಸದಸ್ಯೆ ತಾರಾ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: