ಪ್ರಮುಖ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಪ್ರಧಾನಿ ಮೋದಿ ಭಾಷಣ ಸಾಧ್ಯತೆ

ದೇಶ(ನವದೆಹಲಿ)ಸೆ.3:- ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಇದೇ ಸೆಪ್ಟೆಂಬರ್ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಈ ಬಾರಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿರುವ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೂ ಇದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಪ್ರಧಾನಿ ಮೋದಿ ಅವರು ಇದೇ ಸೆ. 26 ರಂದು ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಗಳಿವೆ. ವರ್ಚುವಲ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮಾತನಾಡಲಿದ್ದಾರೆ. ಸಾಮಾನ್ಯ ಸಭೆಯ 75ನೇ ಅಧಿವೇಶನವು ಇದೇ 22ರಿಂದ 29 ರವರೆಗೆ ನಡೆಯಲಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: