ಮೈಸೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಸೆ.3:- ಆದಾಯ ತೆರಿಗೆ ವ್ಯಾಪ್ತಿಗೆ ಬರದ ಎಲ್ಲ ಬಡ ಕುಟುಂಬಗಳಿಗೆ ತಕ್ಷಣದಿಂದ ಮುಂದಿನ 6ತಿಂಗಳವರೆಗೆ ತಿಂಗಳಿಗೆ 7500ನಗದು ವರ್ಗಾವಣೆ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಒಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯೂನಿಷ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ತಕ್ಷಣದಿಂದಲೇ ಅಗತ್ಯವಿರುವ ಎಲ್ಲರಿಗೂ ಮುಂದಿನ 6ತಿಂಗಳವರೆಗೆ ಪ್ರತಿಯೊಬ್ಬ ವ್ಯಕ್ತಿಗೆ 10ಕೆಜಿಯಂಯತೆ ಉಚಿತ ಆಹಾರ ಧಾನ್ಯಗಳನ್ನು ವಿತರಣೆ ಮಾಡಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ವಿಸ್ತರಿಸಿ ಕೂಲಿ ದರವನ್ನು ಏರಿಸಿ ವರ್ಷದಲ್ಲಿ 200ದಿನಗಳ ಕೆಲಸದ ಖಾತ್ರಿಯನ್ನು ಒದಗಿಸಬೇಕು. ಒಂದು ನಗರ ಉದ್ಯೋಗ ಖಾತ್ರಿ ಕಾಯ್ದೆಯನ್ನು ತರಬೇಕು. ಎಲ್ಲಾ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆಯನ್ನು ಪ್ರಕಟಿಸಬೇಕು. ಅಂತರರಾಜ್ಯ ವಲಸೆ ಕೆಲಸಗಾರರ ಕಾಯ್ದೆ 1979ನ್ನು ತೆಗೆದುಹಾಕುವ ಪ್ರಸ್ತಾವವನ್ನು ರದ್ದು ಮಾಡಬೇಕು. ಬದಲಿಗೆ ಈ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಕೇಂದ್ರೀಯ ವೆಚ್ಚವನ್ನು ಕನಿಷ್ಠ ಜಿಡಿಪಿಯ ಶೇ.3ಕ್ಕೆ ಹೆಚ್ಚಿಸಬೇಕು. ಅಗತ್ಯ ವಸ್ತುಗಳ ಕಾಯ್ದೆಯನ್ನು ತೆಗೆದುಹಾಕುವ ಮತ್ತು ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಎಲ್ಲ ಸುಗ್ರೀವಾಜ್ಞೆಯನ್ನು ರದ್ದು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಕೆ.ಬಸವರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: