ಮೈಸೂರು

24ನೇ ವಾರ್ಷಿಕ ಬೇಸಿಗೆ ಶಿಬಿರಕ್ಕೆ ಚಾಲನೆ : ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ ; ಪ್ರೊ.ದಯಾನಂದ ಮಾನೆ

ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಸ್ಪೋರ್ಟ್ಸ್ ಪೆವಿಲಿಯನ್ ನಲ್ಲಿ  ಒಂದು ತಿಂಗಳ ಕಾಲ ಆಯೋಜಿಸಲಾದ 24ನೇ ವಾರ್ಷಿಕ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಮಾನೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮಕ್ಕಳು ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತರಾಗಿರಬಾರದು. ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಅದರಲ್ಲೂ ಕ್ರೀಡೆ ಪ್ರಮುಖ ಪಾತ್ರ ವಹಿಸಲಿದ್ದು, ಕ್ರೀಡೆಯಿಂದ ದೈಹಿಕ ಬೆಳವಣಿಗೆಯಾಗುವುದಲ್ಲದೇ, ಮಾನಸಿಕವಾಗಿಯೂ ಬೆಳವಣಿಗೆಯಾಗಲಿದೆ. ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ಪಾಲ್ಗೊಂಡು ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ ಎಂದರು.

ಈ ಸಂದರ್ಭ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮೈಸೂರು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಚಿಣ್ಣರು ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: