ಮೈಸೂರು

ಕೆಎಸ್ ಆರ್ ಟಿಸಿ ಬಸ್ ಗೆ ಕ್ರೇನ್ ಡಿಕ್ಕಿ : ಮೂರು ವಾಹನಗಳು ಜಖಂ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದಕ್ಕೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಪಕ್ಕದಲ್ಲಿದ್ದ ಎರಡು ವಾಹನಗಳು ಜಖಂಗೊಂಡ ಘಟನೆ  ನಂಜನಗೂಡಿನ ಹುಲ್ಲಹಳ್ಳಿ ವೃತ್ತದ ಬಳಿ ನಡೆದಿದೆ.

ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಹುಲ್ಲಹಳ್ಳಿ ವೃತ್ತದ ಬಳಿ ಸಾಗುತ್ತಿದ್ದ ವೇಳೆ ಕ್ರೇನ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಅಲ್ಲೆ ಪಕ್ಕದಲ್ಲಿ ಸಾಗುತ್ತಿದ್ದ ಇನ್ನೊಂದು  ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ವಾಹನಗಳು ಜಖಂಗೊಂಡಿವೆ. ಬಸ್ಸಿನಲ್ಲಿದ್ದ ಐವರು ಪ್ರಯಾನಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.

ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: