ಸುದ್ದಿ ಸಂಕ್ಷಿಪ್ತ

ಸೋಮವಾರಪೇಟೆಯಲ್ಲಿ ಬೀಡಾಡಿ ದನಗಳ ಹಾವಳಿ

ರಾಜ್ಯ( ಮಡಿಕೇರಿ) ಸೆ.4 :- ಸೋಮವಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರಿಗೆ, ಪಾದಾಚಾರಿಗಳಿಗೆ ರಸ್ತೆಯಲ್ಲಿ ಸಂಚರಿಸಲು ಅನಾನುಕೂಲವಾಗುತ್ತಿದೆ. ಈ ಬಗ್ಗೆ ಕಚೇರಿಗೆ ದೂರುಗಳು ಬರುತ್ತಿರುವುದರಿಂದ ಬಿಡಾಡಿ ದನಕರುಗಳನ್ನು ಹಿಡಿದು ಗೋಶಾಲೆಗೆ ಬಿಡಲಾಗುವುದು. ಮುಂದಿನ ಕಷ್ಟನಷ್ಟಕ್ಕೆ ಪಟ್ಟಣ ಪಂಚಾಯಿತಿ ಜವಾಬ್ದಾರರಾಗುವುದಿಲ್ಲ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಕೆ.ನಾಚಪ್ಪ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: