ಮೈಸೂರು

ಮೈಸೂರಿನಲ್ಲಿ ಎಸ್.ಎಂ.ಕೃಷ್ಣ : ಬಿಜೆಪಿ ಗೆಲುವಿನ ವಿಶ್ವಾಸ

ಬಿಜೆಪಿ ಸೇರಿದ ನಂತರ ಇದೇ ಮೊದಲಬಾರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ  ಟಿಪ್ಪು ಎಕ್ಸಪ್ರೆಸ್ ರೈಲಿನಲ್ಲಿ ಮೈಸೂರಿಗೆ ಬಂದಿಳಿದರು. ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಕೃಷ್ಣ ಅವರ ಜೊತೆಗಿದ್ದರು.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ನಗರಾಧ್ಯಕ್ಷ ಬಿ.ಮಂಜುನಾಥ್ ಸೇರಿದಂತೆ ಹಲವು ಕಾರ್ಯಕರ್ತರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಎಸ್.ಎಂ.ಕೃಷ್ಣ ಇಂದಿನಿಂದ ಎರಡೂ ಕ್ಷೇತ್ರಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಅದ್ಭುತ ಗೆಲುವನ್ನು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಸಂಸದ ಕಾಗಲವಾಡಿ ಶಿವಣ್ಣ , ಕೋಡೆ ಶಿವಣ್ಣ, ನಾಗೇಂದ್ರ, ಬಿ.ಪಿ.ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.   (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: