ಮೈಸೂರು

ಬಡ್ತಿ ಮೀಸಲಾತಿ ವಿಧೇಯಕ ಅಂಗೀಕರಿಸಲು ಒತ್ತಾಯಿಸಿ ಪ್ರತಿಭಟನೆ

ಕೇಂದ್ರ ಸರ್ಕಾರ ಬಡ್ತಿ ಮೀಸಲಾತಿಗೆ ಸಂಬಂಧಪಟ್ಟ ಸಂವಿಧಾನ ತಿದ್ದುಪಡಿ ವಿಧೇಯಕವನ್ನು ಪಾರ್ಲಿಮೆಂಟ್ ನಲ್ಲಿ ಅಂಗೀಕರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮೈಸೂರು ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಸರ್ವೋಚ್ಛ ನ್ಯಾಯಾಲಯವು ಇತ್ತೀಚೆಗೆ ನೀಡಿದ ಆದೇಶದಿಂದ ಶೋಷಿತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವಂತೆ ಹಾಗೂ ಅದರ ರಕ್ಷಣೆಗಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಬಡ್ತಿ ಮೀಸಲಾತಿಯನ್ನು ಸಂರಕ್ಷಿಸುವ ಸಲುವಾಗಿ ಸಂವಿಧಾನದ 9ನೇ ಪರಿಚ್ಛೇದದಡಿ ಸೇರ್ಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನಿಂಗರಾಜ್ ಮಲ್ಲಾಡಿ, ಹೆಚ್.ಪಿ.ದಿವಾಕರ್, ಕಾರ್ಯಬಸವಣ್ಣ, ಮಹದೇವಸ್ವಾಮಿ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: