ಮೈಸೂರು

ಏ.4: ಬಡ್ತಿ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ

ಬಡ್ತಿ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ಅನುಷ್ಠಾನಕ್ಕಾಗಿ ಒತ್ತಾಯಿಸಿ ಅಹಿಂಸಾ ವೇದಿಕೆ ವತಿಯಿಂದ ಏಪ್ರಿಲ್ 4 ರಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ‍್ಯಕ್ಷ ಎಂ.ಕೆ.ನಂಜಯ್ಯ ತಿಳಿಸಿದರು.

ಸೋಮವಾರ ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಅಹಿಂಸಾ ವೇದಿಕೆ ರಾಜ್ಯ ಮಟ್ಟದ ಪದಾಧಿಕಾರಿಗಳಿಂದ ಭಾಷಣ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. 11 ಗಂಟೆಗೆ ಆಂಜನೇಯಸ್ವಾಮಿ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಹೊರಟು, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಕೆ.ಗೋವಿಂದಯ್ಯ, ಬಾಲಾಜಿ, ಅಶೋಕ್ ಇನ್ನಿತರರು ಉಪಸ್ಥಿತರಿದ್ದರು. (ಎಲ್.ಜಿ-ಎಸ್.ಎಚ್)

Leave a Reply

comments

Related Articles

error: