ಮೈಸೂರು

ಜಂಬೂ ಸವಾರಿ ಮೆರವಣಿಗೆಯಲ್ಲಿ ಅಭಿಮನ್ಯು ಅಂಬಾರಿ ಹೊರುವ ಸಾಧ್ಯತೆ

ಮೈಸೂರು,ಸೆ.7:- ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಕುರಿತು ನಾಳೆ ಹೈಪವರ್ ಕಮಿಟಿ ಮೀಟಿಂಗ್ ನಲ್ಲಿ ಯಾವ ರೀತಿ ದಸರಾ ಆಚರಿಸಬೇಕೆನ್ನುವ ಕುರಿತು ಅಂತಿಮ ನಿರ್ಧಾರವಾಗಲಿದೆ. ಈ ನಡುವೆ ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊರುವ ಭಾಗ್ಯ ಅಭಿಮನ್ಯುಗೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ಸತತ 8 ವರ್ಷ ಯಶಸ್ವಿಯಾಗಿ ಅಂಬಾರಿ ಹೊತ್ತ ಅರ್ಜುನ ಈಗಾಗಲೇ 60 ವರ್ಷ ಪೂರೈಸಿದ್ದು ಈ ಹಿನ್ನೆಲೆಯಲ್ಲಿ ಈ ಬಾರಿ ಬೇರೆ ಆನೆ ಅಂಬಾರಿ ಹೊರಬೇಕಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ 60 ವರ್ಷ ತುಂಬಿದ ಆನೆಗಳಿಗೆ ಭಾರ ಹೊರಿಸುವಂತಿಲ್ಲ. ಹೀಗಾಗಿ ಈ ಬಾರಿ ಅರ್ಜುನನ ಬದಲಿಗೆ ಅಭಿಮನ್ಯು ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.
ಈ ಬಗ್ಗೆ ಅರಣ್ಯ ಇಲಾಖೆ ಕಾನೂನು ತಜ್ಞರ ಸಲಹೆ ಪಡೆದು ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ. ಕೂಂಬಿಂಗ್ ಸ್ಪೆಷಲಿಸ್ಟ್ ಎಂದೇ ಹೆಗ್ಗಳಿಕೆ ಪಡೆದಿರುವ ಅಭಿಮನ್ಯು ಆನೆ ದಸರಾದಲ್ಲಿ ನೌಪತ್ ಆನೆಯಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: