ಪ್ರಮುಖ ಸುದ್ದಿಮೈಸೂರು

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆಯಾಗಲ್ಲ : ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ

ಮೈಸೂರು,ಸೆ.7:- ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭೂ ಸುಧರಾಣೆ ಕಾಯ್ದೆ ಹಳೆಯ ಕಾಯ್ದೆಯಾಗಿದೆ. ಅದರಲ್ಲಿ ಕೆಲವು ನಿಬಂಧನೆಗಳಿವೆ. ಆಯಾಯ ಕಾಲಕ್ಕೆ ತಕ್ಕಂತೆ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದರು.
ಲಾಭ ಇಲ್ಲವೆಂದು ರೈತ ಎಂದೂ ಕೂಡ ಕೃಷಿ ಮಾಡುವುದನ್ನು ನಿಲ್ಲಿಸಿಲ್ಲ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರ ಜಮೀನಿಗೆ ಒಳ್ಳೆಯ ಬೆಲೆ ಸಿಗಲಿದೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿರುವುದರಿಂದ ಎಲ್ಲರೂ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಸರ್ಕಾರ ಕೃಷಿಗೆ ಯೋಗ್ಯವಲ್ಲದ ಜಮೀನನ್ನು ಮಾತ್ರ ಕೈಗಾರಿಕೆಗಳ ಸ್ಥಾಪನೆಗೆ ನೀಡಲಿದೆ. ಕೃಷಿಗೆ ಯೋಗ್ಯವಾಗಿರುವ ಜಮೀನನ್ನು ಕೈಗಾರಿಕೆಗಳ ಸ್ಥಾಪನೆಗೆ ನೀಡುವುದಿಲ್ಲ ಎಂದರು.
ಸರ್ಕಾರ ಮತ್ತು ರೈತರ ನಡುವೆ ರಾಯಭಾರಿಯಂತೆ ಬಿಜೆಪಿ ರೈತ ಮೋರ್ಚಾ ಕಾರ್ಯ ನಿರ್ವಹಿಸುತ್ತಿದೆಎಂದರು.
ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ. ತಪ್ಪಿತಸ್ಥರು ಯಾವುದೇ ಪಕ್ಷಕ್ಕೆ ಸೇರಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: