ಪ್ರಮುಖ ಸುದ್ದಿಮೈಸೂರು

ಮೈಸೂರು ಜಿಲ್ಲೆಯ ಕೃಷಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ಮೈಸೂರು,ಸೆ.8:- ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಮೈಸೂರು ಜಿಲ್ಲೆಯ ಕೃಷಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ನಡೆದ ಸಭೆಯನ್ನು ಸಚಿವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಮೈಸೂರು ವಿಭಾಗಿಯ ಮಟ್ಟದ ಬೆಳೆ ಸಮೀಕ್ಷೆ ಹಾಗೂ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಕುರಿತು ಸಭೆ ನಡೆಸಿದರು. ಕೃಷಿ ಚಟುವಟಿಕೆಗಳ ಯೋಜನೆಗಳು ಹಾಗೂ ಅನುಷ್ಠಾನ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳ ಕೃಷಿ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: